ಅಗ್ನಿ ದುರಂತ: ಮನೆಯಲ್ಲಿ ಮಲಗಿದ್ದ ಆರು ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಚಾರ್ಯಾಲ ಜಿಲ್ಲೆಯ ಮಂದಮರ್ರಿ ಮಂಡಲದ ಗುಡಿಪಲ್ಲಿಯಲ್ಲಿ ಮಧ್ಯರಾತ್ರಿ ಮನೆಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆ. ಮನೆ ಮಾಲೀಕ ಶಿವಯ್ಯ ಸೇರಿದಂತೆ ಐವರು ಸಾವನ್ನಪ್ಪಿದ್ದು, ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ.

ಮೃತ ನಾಲ್ವರು 50 ಮತ್ತು 35 ವರ್ಷ ವಯಸ್ಸಿನವರಿದ್ದು,  ಹಿಮಬಿಂದು(2) ಮತ್ತು ಸ್ವೀಟಿ ಎಂಬ ಇಬ್ಬರು ಪುಟ್ಟ ಮಕ್ಕಳು ಸೇರಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆತಂದು ಬೆಂಕಿ ನಂದಿಸಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂದು ತನಿಖೆ ನಡೆಸುತ್ತಿದ್ದಾರೆ.

ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮಂಚಿರ್ಯಾಲ ಡಿಸಿಪಿ ಅಖಿಲ್ ಮಹಾಜನ್, ಮಂದಮರ್ರಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಪ್ರಾಥಮಿಕವಾಗಿ ಖಚಿತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!