ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಮಿನಿವ್ಯಾನ್‌ಗೆ ಟ್ರಕ್‌ ಡಿಕ್ಕಿಯಾಗಿ ಆರು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ರಸ್ತೆ ಪಕ್ಕ ನಿಂತಿದ್ದ ಮಿನಿವ್ಯಾನ್‌ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿ ಹತ್ತು ಜನರು ಗಾಯಗೊಂಡ ದುರ್ಘಟನೆ ಸೋಮವಾರ ಬೆಳಗಿನ ಜಾವ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ರೆಂಟಚಿಂತಲ ಗ್ರಾಮದಲ್ಲಿ ಸಂಭವಿಸಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅಪಘಾತದ ಸಂದರ್ಭದಲ್ಲಿ ಮಿನಿವ್ಯಾನ್‌ನಲ್ಲಿ 39 ಮಂದಿ ಪ್ರಯಾಣಿಕರಿದ್ದರು. ಶ್ರೀಶೈಲದಿಂದ ಆಗಮಿಸಿದ್ದ ಮಿನಿವ್ಯಾನ್ ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಟ್ರಕ್‌ ಹಿಂಬದಿಯಿಂದ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುಗಳ ರಕ್ಷಣಾ ಕಾರ್ಯಚರಣೆ ನಡೆಸಿದರು ಎಂದು ಎಂದು ಗುರ್ಜಾಲ ಪೊಲೀಸ್ ಉಪಾಧೀಕ್ಷಕ (ಡಿಎಸ್ಪಿ) ಜಯರಾಮ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಗುರ್ಜಾಲ ಸರ್ಕಾರಿ ಆಸ್ಪತ್ರೆ ಹಾಗೂ ನರಸರಾವ್‌ಪೇಟೆಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!