ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಉದಯಪುರ ಫೈಲ್ಸ್’ ಚಿತ್ರದ ಆರು ದೃಶ್ಯಗಳ ಭಾಗಗಳನ್ನು ತೆಗೆದು ಹಾಕಲು ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜಾಯ್ ಮಾಲ್ಯ ಬಾಗ್ನಿ ಅವರಿದ್ದ ಪೀಠವು ಈ ಕುರಿತು ವಿಚಾರಣೆ ನಡೆಸಿದರು.
ಸಕ್ಷಮ ಪ್ರಾಧಿಕಾರವು ಶಿಫಾರಸು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮ ಕೈಗೊಳ್ಳುವುದು ಸಂವಿಧಾನದ 19ನೇ ವಿಧಿಯ ಉಲ್ಲಂಘನೆಯಾಗುತ್ತದೆ. ನಾನು ಆದೇಶವನ್ನು ಪರಿಶೀಲಿಸಿದ್ದೇನೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಪೀಠಕ್ಕೆ ತಿಳಿಸಿದರು.
ಮುಂದಿನ ಆದೇಶದವರೆಗೆ ಚಿತ್ರ ಬಿಡುಗಡೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿತು. ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.
ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆಯ ಘಟನೆಯನ್ನು ಆಧಾರವಾಗಿಟ್ಟುಕೊಂಡು ಈ ಚಿತ್ರ ನಿರ್ಮಿಸಲಾಗಿದೆ. ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಹತ್ಯೆ ಆರೋಪಿ ಮೊಹಮ್ಮದ್ ಜಾವೇದ್ ಪರ ವಕೀಲರು ಮನವಿ ಸಲ್ಲಿಸಿದ್ದಾರೆ