ಹೊಸದಿಗಂತ ಚಿತ್ರದುರ್ಗ:
ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ಆರುಜನ ವಿದ್ಯಾರ್ಥಿಗಳು ಶಾಲೆಯಿಂದ ನಾಪತ್ತೆಯಾಗಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಪಾಡಿಗಟ್ಟೆ ಗ್ರಾಮದ ಯಶಸ್, ಟಿ.ಎಮ್ಮಿಗನೂರು ಗ್ರಾಮದ ಶ್ರೇಯಸ್, ಹಾಲೇನಹಳ್ಳಿ ಗ್ರಾಮದ ತರುಣ್, ರಾಮಗಿರಿ ಗ್ರಾಮದ ಸಿದ್ದಾರ್ಥ್, ಕಸುವನಹಳ್ಳಿ ಗ್ರಾಮದ ಅನೂಪ್ ಹಾಗೂ ನಂದನಹೊಸೂರು ಗ್ರಾಮದ ಧನುಷ್ ನಾಪತ್ತೆಯಾದ ವಿದ್ಯಾರ್ಥಿಗಳು.
ಇವರು ಹೊಳಲ್ಕೆರೆ ಪಟ್ಟಣದ ಡ್ರೀಮ್ ವರ್ಲ್ಡ್ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮುಂಜಾನೆ 5 ಗಂಟೆಯಿಂದ ನಾಪತ್ತೆಯಾಗಿದ್ದಾರೆ. ರೈಲಿನ ಮೂಲಕ ಪ್ರಯಾಣ ಬೆಳೆಸಿ ನಾಪತ್ತೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕಾರಣ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ.