ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಭಯೋತ್ಪಾದಕರು ಹತರಾಗಿರುವ ಘಟನೆ ಬಲೂಚಿಸ್ತಾನದ ಝೋಬ್ ಜಿಲ್ಲೆಯ ಸಾಂಬಾಜಾ ಪ್ರದೇಶದಲ್ಲಿ ನಡೆದಿದೆ. ಗುಪ್ತಚರ ವರದಿ ಆಧರಿಸಿ ಬುಧವಾರ ತಡರಾತ್ರಿ ಪಾಕ್ ಸೇನೆ ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು, ಭದ್ರತಾ ಪಡೆಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಮತ್ತು ಅಮಾಯಕ ನಾಗರಿಕರನ್ನು ಕೊಲ್ಲುವ ಗುರಿಯನ್ನು ಹೊಂದಿದ್ದಾರೆ ಎಂದು ಪಾಕಿಸ್ತಾನದ ಮಿಲಿಟರಿ ಮಾಧ್ಯಮದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಹೇಳಿದೆ.
ರಾಷ್ಟ್ರದೊಂದಿಗೆ ಹೆಜ್ಜೆ ಹಾಕುತ್ತಾ ಬಲೂಚಿಸ್ತಾನದ ಶಾಂತಿ, ಸ್ಥಿರತೆ ಮತ್ತು ಪ್ರಗತಿಯನ್ನು ಹಾಳುಮಾಡುವ ಪ್ರಯತ್ನಗಳನ್ನು ಹತ್ತಿಕ್ಕುವುದಾಗಿ ಪಾಕಿಸ್ತಾನದ ಭದ್ರತಾ ಪಡೆಗಳ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮಂಗಳವಾರ, ಪಾಕ್ ಪ್ರಾಂತ್ಯದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಒಬ್ಬ ಪೊಲೀಸ್ ಸೇರಿದಂತೆ ಐದು ಜನರು ಸಾವನ್ನಪ್ಪಿದರು. ಇರಾನ್ ಮತ್ತು ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನವು, ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿ ಸಂಘಟನೆಗಳ ಭಯೋತ್ಪಾದಕ ಚಟುವಟಿಕೆಗಳ ಕೇಂದ್ರವಾಗಿದೆ.