Thursday, March 23, 2023

Latest Posts

VIRAL VIDEO| ಅನಾರೋಗ್ಯದ ತಂದೆಯನ್ನು ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ಬಾಲಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಆರು ವರ್ಷದ ಬಾಲಕನೊಬ್ಬ ತನ್ನ ತಂದೆಯನ್ನು ತಳ್ಳುವ ಗಾಡಿಯಲ್ಲಿ ಕರೆದೊಯ್ದಿರುವ ಹೃದಯ ವಿದ್ರಾವಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರೌಲಿ ಎಂಬಲ್ಲಿ ಈ ಘಟನೆ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ವಿರುದ್ಧ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಹೀಗಾಗಿ ಘಟನೆ ಕುರಿತು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಕತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬಲಿಯಾರಿಯಲ್ಲಿ ಶಾ ಕುಟುಂಬ ವಾಸವಾಗಿದೆ. ಇದ್ದಕ್ಕಿದ್ದಂತೆ ಷಾ ಅಸ್ವಸ್ಥರಾದ್ದರಿಂದ ಸ್ಥಳೀಯರು 108 ಆಂಬುಲೆನ್ಸ್‌ಗೆ ಕರೆ ಮಾಡಿ ಅರ್ಧ ಗಂಟೆ ಕಳೆದರೂ ಬಂದಿಲ್ಲ. ರೋಗಿಯ ಸ್ಥಿತಿ ಕ್ಷೀಣಿಸುತ್ತಿದ್ದರಿಂದ ಆರು ವರ್ಷದ ಮಗ ತನ್ನ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ತಾಯಿ ಮತ್ತು ಸ್ಥಳೀಯರ ಸಹಾಯದಿಂದ ತಳ್ಳುವ ಗಾಡಿಯಲ್ಲಿ ಸುಮಾರು ಮೂರು ಕಿಮೀ ದೂರ ತಳ್ಳಿದ್ದಾನೆ.

ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಏಕೆ ಬಂದಿಲ್ಲ ಎಂದು ಎಡಿಎಂ ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!