spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೌಶಲ್ಯಾಧಾರಿತ ತರಬೇತಿ ಇಲ್ಲದೆ ಏನನ್ನೂ ಸಾಧಿಸಲಾಗದು: ವೇಣುಗೋಪಾಲ್

- Advertisement -Nitte

ಹೊಸ ದಿಗಂತ ವರದಿ, ಮಂಡ್ಯ:

ಯಾವುದೇ ಕೆಲಸಕ್ಕೂ ತರಬೇತಿ ಅಗತ್ಯ. ಕೌಶಲ್ಯಾಧಾರಿತ ತರಬೇತಿ ಇಲ್ಲದ ಕೆಲಸದಿಂದ ಏನನ್ನೂ ಸಾಧಿಸಲಾಗದು ಎಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಕೇಂದ್ರದ ಅಧಿಕಾರಿ ವೇಣುಗೋಪಾಲ್ ತಿಳಿಸಿದರು.
ಪಿಇಎಸ್ ಇಂಜಿನಿಯರಿಂಗ್ ಕಾಲೇಜು, ಬರ್ಡ್ಸ್ ಸಂಸ್ಥೆಘಿ, ಮಕ್ಕಳ ಸಹಾಯವಾಣಿ 1098, ಗ್ರಾ.ಪಂ. ಬೇವಿನಹಳ್ಳಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ತಾಲೂಕಿನ ಬೇವಿನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ನಡೆದ ಗ್ರಾಮೀಣ ಪ್ರದೇಶದ ಯುವಜನರಿಗೆ ಸ್ವಯಂ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಉದ್ಯೋಗ ಕಡ್ಡಾಯ. ಉದ್ಯೋಗವಿಲ್ಲದೆ ಜೀವನ ಮಾಡಲು ಸಾಧ್ಯವಿಲ್ಲ. ಯಾವುದಾದರೊಂದು ಉದ್ಯೋಗ ಪ್ರತಿಯೊಬ್ಬರೂ ಮಾಡುವ ಅಗತ್ಯತೆ ಇದೆ. ಜೀವನ ಹೇಗೆ ಬೇಕಾದರೂ ಮಾಡಬಹುದು. ಆದರೆ ತರಬೇತಿ ಪಡೆದು ಮಾಡಿದರೆ ಸಾರ್ಥಕತೆ ಉಂಟಾಗುತ್ತದೆ ಎಂದರು.
ಸರ್ಕಾರಿ ಕೆಲಸಕ್ಕೆ ನಿಯೋಜನೆಯಾದ ನೌಕರರು, ಸಿಬ್ಬಂದಿಗಳು, ಅಧಿಕಾರಿಗಳು ಎರಡು ವರ್ಷಗಳ ಕಾಲ ವಿವಿಧ ಇಲಾಖೆಗಳಲ್ಲಿ ಕಲಿಕೆ (ತರಬೇತಿ)ಯಲ್ಲಿ ತೊಡಗುತ್ತಾರೆ. ಇತ್ತೀಚಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ವತಿಯಿಂದ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss