Sunday, March 7, 2021

Latest Posts

ಎಟಿಎಂಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಕೆ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

ಹೊಸದಿಗಂತ ವರದಿ, ಮಂಗಳೂರು:

ನಗರದಲ್ಲಿನ ಎಟಿಎಂಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಿ ಸಾರ್ವಜನಿಕರ ಹಣ ಲಪಟಾಯಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ನಗರದ ಮಂಗಳಾದೇವಿಯಲ್ಲಿ ಭಾನುವಾರ ತಂಡವೊಂದು ಎಟಿಎಂಗೆ ಸ್ಕಿಮ್ಮಿಂಗ್ ಉಪಕರಣ ಅಳವಡಿಸುವುದನ್ನು ಸಾರ್ವಜನಿಕರು ಪತ್ತೆಹಚ್ಚಿದ್ದರು. ಈ ಸಂದರ್ಭ ಸಾರ್ವಜನಿಕರೇ ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದರು.

ಮಂಗಳಾದೇವಿಯಲ್ಲಿ ಎಟಿಎಂನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಿದ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ಮಂದಿಯ ತಂಡ ಈ ಕೃತ್ಯದಲ್ಲಿ ಭಾಗಿಯಾಗಿದೆ ಎನ್ನಲಾಗಿದೆ. ಈ ಆರೋಪಿಗಳು ನಗರದ ಸುಮಾರು 40 ಕಡೆಯ ಎಟಿಎಂಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಬಂಧಿತರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss