October 1, 2026
Thursday, October 1, 2026
spot_img

ಪ್ರಾಣಕ್ಕೆ ಕುತ್ತು ತಂದ ಸ್ಕಿಪ್ಪಿಂಗ್ ಹಗ್ಗ: ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು

ಹೊಸ ದಿಗಂತ ವರದಿ,ಬೆಳಗಾವಿ:

ವಿದ್ಯುತ್ ತಂತಿ ತಗುಲಿ 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಸಾನ್ವಿ ಕಾಂಬಳೆ (9) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ, ಮನೆಯ ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿದೆ. ಹಗ್ಗವನ್ನು ತೆಗೆದುಕೊಳ್ಳಲು ಮೇಲಕ್ಕೆ ಹೋದಾಗ ಬಾಲಕಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ, ಪರಿಣಾಮ ಮನೆಯ ಮೇಲಿಂದ ಕೆಳಗೆ ಬಿದ್ದ ಕೂಡಲೇ ತಕ್ಷಣವೇ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read