ಕೆಎಸ್​ಆರ್​ಟಿಸಿಗೆ ‘SKOCH 2’ ರಾಷ್ಟ್ರೀಯ ಪ್ರಶಸ್ತಿಯ ಗರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೆಎಸ್​ಆರ್​ಟಿಸಿಗೆ ಮತ್ತೆ ಪ್ರತಿಷ್ಠಿತ SKOCH ಪ್ರಶಸ್ತಿ ಒಲಿದು ಬಂದಿದೆ. ಕಾರ್ಮಿಕ ಕಲ್ಯಾಣ, ಶಕ್ತಿ ಯೋಜನೆಗಳಿಗೆ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ. ಇತ್ತೀಚೆಗಷ್ಟೇ, ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಕೆಎಸ್​ಆರ್​​ಟಿಸಿಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ಈ ಪ್ರಶಸ್ತಿ ಒಲಿದು ಬಂದಿದೆ.

ಈ ಬಗ್ಗೆ ನಿಗಮದಿಂದ ಮಾಹಿತಿ ಹಂಚಿಕೊಂಡಿದ್ದು, ಕರಾರಸಾ ನಿಗಮಕ್ಕೆ ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ ಸ್ಕಾಚ್‌ ನ 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ ಎಂದಿದೆ.

ಶನಿವಾರ ಸ್ಕಾಚ್ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ಅವರು ನಿಗಮಕ್ಕೆ ಸ್ಕಾಚ್​ನ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೆಎಸ್​​ಆರ್​ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ ಪ್ರಕಾಶ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ದೆಹಲಿ ಮೂಲದ SKOCH ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆ 2003 ರಿಂದ SKOCH ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳ ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ ಎಂದು ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!