ಭವಿಷ್ಯನುಡಿದಿದೆ ಸ್ಕೈಮೆಟ್: ಎಲ್ಲಾ ಚಿಂತೆಯಿಂದ ಪಾರುಮಾಡಲಿದೆಯೇ ಈ ಬಾರಿಯ ಮುಂಗಾರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ಅಧ್ಯಯನ ಸಂಸ್ಥೆ ಸ್ಕೈಮೆಟ್ ಯುಗಾದಿಯ ಸ0ಭ್ರಮದ ಹೊತ್ತಿನಲ್ಲಿಯೇ ಈ ವರ್ಷದ ಹವಾಮಾನ ವರದಿ ನೀಡಿದ್ದು, ದೇಶದಲ್ಲಿ ಜೂನ್ ಹಾಗೂ ಸೆಪ್ಟೆಂಬರ್ ನಡುವೆ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆ ಅಂದಾಜಿಸಿದೆ.
ಆದರೆ ಒಟ್ಟಾರೆಯಾಗಿ ಮುಂಗಾರು ಮಳೆ ಶೇಕಡಾ 102ರಷ್ಟು ಆಗುವ ನಿರೀಕ್ಷೆಯಿದೆ ಎಂದಿರುವ ಸ್ಕೈಮೆಟ್, ಜೂನ್‌ನಿಂದ ಸೆಪ್ಟೆಂಬರ್‌ವರೆಗೆ, ಮಧ್ಯ ಮತ್ತು ಪಶ್ಚಿಮ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದೆ. ಉಳಿದಂತೆ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ಈಶಾನ್ಯ ಭಾರತ ಮತ್ತು ಪೂರ್ವ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದೂ ಅದು ಹೇಳಿದೆ.
ದೇಶದ ದಕ್ಷಿಣ, ಪಶ್ಚಿಮ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಅನುಕೂಲಕರ ಮಳೆ, ಮಳೆಯಾಶ್ರಿತ ಪ್ರದೇಶಗಳಾದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗಲಿದೆ. ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ರಾಜ್ಯಗಳು ಗರಿಷ್ಠ ಮಾನ್ಸೂನ್ ತಿಂಗಳುಗಳಲ್ಲಿ ಮಳೆ ಕೊರತೆ ಅಪಾಯ ಎದುರಿಸಲಿವೆ ಎಂದು ಸ್ಕೈಮೆಟ್ ಹೇಳಿದೆ.
ದೇಶದಲ್ಲಿ ಮಾಸಿಕವಾಗಿ ಮಳೆಯ ಪ್ರಮಾಣವನ್ನೂ ಸ್ಕೈಮೆಟ್ ಹೇಳಿದ್ದು, ಜೂನ್ 95%, ಜುಲೈ 105%, ಆಗಸ್ಟ್ 98% ಮತ್ತು ಸೆಪ್ಟೆಂಬರ್ 110% ಸರಾಸರಿ ಮಳೆಯಾಗುವ ಸಾಧ್ಯತೆ ಕಂಡುಬರುತ್ತಿದೆ ಎಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!