ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ನಿಧನ ಬಗ್ಗೆ ಬೆಂಗಳೂರು ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯ ಮೆಡಿಕಲ್ ಅಡ್ಮಿನಿಸ್ಟ್ರೇಟರ್ ಡಾ. ಶೈಲಾ ಅವರು ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಆರೋಗ್ಯವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕಳೆದ 3 ದಿನಗಳ ಹಿಂದೆ ಮತ್ತೆ ಸ್ವಲ್ಪ ಅಸ್ವಸ್ಥರಾಗಿ, ಸುಸ್ತು ಹಾಗೂ ಕಾಲುನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರಿಗೆ ಹಠಾತ್ ಆಗಿ ಹೃದಯ ಸ್ತಂಭನವಾಯಿತು. ಅವರನ್ನು ಉಳಿಸಿಕೊಳ್ಳಲು ಸತತ ಪ್ರಯತ್ನಗಳನ್ನು ಮಾಡಲಾಯಿತು. ಆದರೆ ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಸಲು ಸಾಧ್ಯವಾಗಿಲ್ಲ. 2:38 ನಿಮಿಷಕ್ಕೆ ಅವರು ದೈವಾಧೀನರಾದರು ತಿಳಿಸಿದ್ದಾರೆ.