Wednesday, September 24, 2025

ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಸ್ಎಲ್ ಭೈರಪ್ಪ ಅಂತ್ಯಕ್ರಿಯೆ: ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ.

ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ