ಬಿಜೆಪಿ ವಿರುದ್ಧ ಅಪಪ್ರಚಾರ: ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹೈಕೋರ್ಟ್​ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ.

ಮಧ್ಯಂತರ ತಡೆ ನೀಡಿ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ ತಮ್ಮ ವಿರುದ್ಧದ ಕೇಸ್ ರದ್ದು ಕೋರಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸುದ್ದಿ ಪತ್ರಿಕೆಗಳಲ್ಲಿ ಬಂದಿದ್ದನ್ನೇ ಷೇರ್ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದ ಬಿಜೆಪಿಯ ಕೇಶವ ಪ್ರಸಾದ್​​ರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ.

ಬಿಜೆಪಿ ಸರ್ಕಾರದ ವಿರುದ್ಧ ಕರಪ್ಶನ್ ರೇಟ್ ಕಾರ್ಡ್ ಜಾಹೀರಾತನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಸಮರ ಸಾರಿತ್ತು. 2024 ರ ಜೂನ್ 1ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್​ ನಾಯಕರು ವಿಚಾರಣೆ ಎದುರಿಸಿದ್ದರು.

ಬಳಿಕ ರಾಹುಲ್ ಗಾಂಧಿ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ವಿಚಾರಣೆ ಮುಂದೂಡಿತ್ತು. ಮಾಜಿ ಸಂಸದ ಡಿ.ಕೆ ಸುರೇಶ್‌, ರಾಹುಲ್‌ ಗಾಂಧಿಗೆ 50 ಸಾವಿರ ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿ, ಜಾಮೀನು ಕೊಡಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯವು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಜಾಮೀನು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!