Saturday, January 10, 2026

‘ಚಪ್ಪಲಿ ಏಟಿನ’ ವಿವಾದಕ್ಕೆ ತೆರೆ: ತಹಶೀಲ್ದಾರ್ ಬಳಿ ಬಹಿರಂಗ ಕ್ಷಮೆಯಾಚಿಸಿದ ಶಾಸಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಹಶೀಲ್ದಾರ್ ಅವರಿಗೆ “ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ” ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು, ಇಂದು ತಮ್ಮ ನಡೆಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ರೈತರ ಕೆಲಸಗಳು ವಿಳಂಬವಾಗುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಶಾಸಕರು, ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಕಠಿಣ ಶಬ್ದಗಳಿಂದ ನಿಂದಿಸಿದ್ದರು. ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿ ಸೇವೆ ಮಾಡಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಹಾಗೂ ಟೀಕೆಗೆ ಗುರಿಯಾಗಿತ್ತು.

ಭಾನುವಾರ ನಡೆದ ಸರ್ಕಾರಿ ನೌಕರರ ತಾಲೂಕು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಾಸಕ ಬಾಲಕೃಷ್ಣ, ಅದೇ ವೇದಿಕೆಯಲ್ಲಿದ್ದ ತಹಶೀಲ್ದಾರ್ ಶರತ್ ಕುಮಾರ್ ಅವರ ಬಳಿ ಕ್ಷಮೆ ಕೇಳಿದರು. “ನಾನು ಹಳ್ಳಿಗಾಡಿನಿಂದ ಬಂದವನು, ಆಡುಭಾಷೆಯಲ್ಲಿ ನೇರವಾಗಿ ಮಾತನಾಡಿದ್ದೇನೆ. ನನ್ನ ಮಾತಿನಿಂದ ನಿಮ್ಮ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ” ಎಂದು ಅವರು ವಿನಂತಿಸಿದರು.

error: Content is protected !!