ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರಾದ ಎಸ್ ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಇಂದು ಹುಟ್ಟೂರಿನಲ್ಲಿ ನಡೆಯಲಿದೆ.
ಬೆಂಗಳೂರಿನ ಸದಾಶಿವ ನಗರದ ಮನೆಯಿಂದ ಹೊರಟ ಪಾರ್ಥಿವ ಶರೀರ ಈಗ ಮಂಡ್ಯದ ಸೋಮನಹಳ್ಳಿ ಬಳಿ ತಲುಪಲಿದೆ. ಇನ್ನು ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಪಾರ್ಥಿವ ಶರೀರಕ್ಕೆ ಗಣ್ಯರಿಂದ ಪುಷ್ಪನಮನ ಸಲ್ಲಿಸಲಾಯಿತು.
ಈ ವೇಳೆ ಪೊಲೀಸರಿಂದ ಕುಶಾಲತೋಪು ಸಿಡಿಸಿ ಸರಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು.