ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್‌ನವರಿಗೆ ಕೋಟಿ ಕೋಟಿ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ಬಂದಿದೆ.
ಬೆಂಗಳೂರಿನ ಉಲ್ಲಾಳದ ನಂದಿನಿ ಬೂತ್‌ನ ರವಿ ಅನ್ನೋರಿಗೆ 1 ಕೋಟಿ 3 ಲಕ್ಷ ರೂ. ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ಬಂದಿದೆ. ಹೀಗಾಗಿ ಅಂಗಡಿ ಮಾಲೀಕ ಸಹಜವಾಗಿಯೇ ಗಾಬರಿಯಾಗಿದ್ದಾರೆ.
ಜಿಎಸ್‌ಟಿ ನೋಟಿಸ್‌ಗೆ ಸಣ್ಣಪುಟ್ಟ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದಾರೆ. ಆತಂಕಕ್ಕೆ ಒಳಗಾದ ವ್ಯಾಪಾರಿಗಳು ಜು.25 ರಂದು ಸಂಪೂರ್ಣ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಕಾರ್ಮಿಕ ಪರಿಷತ್ ಕಚೇರಿಯಲ್ಲಿ ನಗರದ ಕಾಂಡಿಮೆಟ್ಸ್, ಬೇಕರಿ ಅಂಗಡಿ ಮಾಲೀಕರು ಸಭೆ ನಡೆಸಿ, ಬಂದ್ ತೀವ್ರತೆ, ಎಲ್ಲೆಲ್ಲಿ ಪ್ರತಿಭಟನೆ ಮಾಡಬೇಕು ಎಂದು ಚರ್ಚಿಸಿದ್ದಾರೆ.