ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದಲ್ಲಿ ಗಣಿಗಾರಿಕೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಪತನವಾಗಿದ್ದು, ಆರುಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಉತ್ತರದಲ್ಲಿರುವ ಗಣಿಗೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಟೇಕ್‌ಆಫ್ ಆಗುತ್ತಲೇ ಫೋರ್ಟ್ ಸ್ಮಿತ್ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಒಬ್ಬರು ಮಾತ್ರ ಪವಾಡದಂತೆ ಬದುಕಿ ಉಳಿದಿದ್ದಾರೆ.
ಕಾರ್ಮಿಕರ ಬಗ್ಗೆ ಹಾಗೂ ಗಾಯಗೊಂಡವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.