Friday, December 8, 2023

Latest Posts

ಕೊಲಂಬಿಯಾದಲ್ಲಿ ಮನೆಗೆ ಡಿಕ್ಕಿ ಹೊಡೆದ ಸಣ್ಣ ವಿಮಾನ : 8 ಪ್ರಯಾಣಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಲಂಬಿಯಾದ ಮೆಡಿಲಿನ್‌ನಲ್ಲಿ ಎಂಟು ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಪತನವಾಗಿದ್ದು, ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ.

ಒಲಯಾ ಹೆರೆಯಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ನಂತರ ವಿಮಾನ ಪತನವಾಗಿದೆ. ಕೊಂಬಿಯಾದ ಎರಡನೇ ಅತಿದೊಡ್ಡ ನಗರವಾದ ಮೆಡೆಲಿನ್ ವಸತಿ ಪ್ರದೇಶದಲ್ಲಿ ವಿಮಾನ ಮನೆಯೊಂದಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ ಎಂಟು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಂಜಿನ್ ವೈಫಲ್ಯದಿಂದ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮನೆಗೆ ವಿಮಾನ ಡಿಕ್ಕಿ ಹೊಡೆದಿದ್ದು, ಮನೆಯಲ್ಲಿ ಯಾರಾದರೂ ಇದ್ದರೇ? ಇದ್ದರೆ ಅವರು ಗಾಯಗೊಂಡಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎನ್ನುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ವಿಮಾನದಲ್ಲಿ ಆರು ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ವಿಮಾನ ನಿಲ್ದಾಣದ ಪಕ್ಕದಲ್ಲೇ ಇದ್ದ ಮನೆಗೆ ಡಿಕ್ಕಿಯಾಗಿದೆ. ಇದರಿಂದಾಗಿ ಏಳು ಮನೆಗಳಿಗೆ ಹಾಗೂ ಆರು ಕಟ್ಟಡಗಳಿಗೆ ಹಾನಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!