Sunday, January 11, 2026

ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ: ಪೈಲಟ್ ಸೇರಿ ಏಳು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಯಾ ಒನ್ ಏರ್ ಸಂಸ್ಥೆಯ ಒಂಬತ್ತು ಆಸನಗಳ ಸಣ್ಣ ವಿಮಾನವು ಶನಿವಾರ ಪತನಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲ ಏಳು ಮಂದಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಒಬ್ಬ ಪೈಲಟ್ ಇದ್ದರು. ರೂರ್ಕೆಲಾದಿಂದ ಸುಮಾರು 10 ರಿಂದ 15 ಕಿಲೋಮೀಟರ್ ದೂರದ ಪ್ರದೇಶದಲ್ಲಿ ವಿಮಾನ ನೆಲಕ್ಕೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದಾಗಿ ಪೈಲಟ್ ಸೇರಿದಂತೆ ಆರು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Food | ಪಂಜಾಬಿ ಸ್ಟೈಲ್ ಚನಾ ಮಸಾಲ ಟ್ರೈ ಮಾಡಿ, ಚಪಾತಿ, ರೋಟಿಗೆ ಬೆಸ್ಟ್ ಕಾಂಬಿನೇಷನ್

ವಿಮಾನ ಪತನದ ಮಾಹಿತಿ ದೊರಕುತ್ತಿದ್ದಂತೆ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಮಾನ ಪತನಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷವೇ ಅಥವಾ ಹವಾಮಾನ ಸಂಬಂಧಿತ ಸಮಸ್ಯೆಯೇ ಅಪಘಾತಕ್ಕೆ ಕಾರಣವಾಗಿದೆಯೇ ಎಂಬ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!