Tuesday, July 5, 2022

Latest Posts

ಸ್ಮಾರ್ಟ ಸಿಟಿಯೇ ನಮ್ಮ ಸಂಕಲ್ಪ: ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಕಲಬುರಗಿ:

ಬಿಜೆಪಿ ಆಡಳಿತದಲ್ಲಿ ಕೇವಲ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಮುಂಬರುವ ದಿನಗಳಲ್ಲಿ ಕಲಬುರಗಿ ನಗರವನ್ನು ಬೇರೆ ರಾಜ್ಯಗಳಿಗಿಂತ ಅತ್ಯಂತ ಸ್ಮಾರ್ಟ ನಗರವನ್ನಾಗಿ ಮಾಡುವುದೇ ಭಾರತೀಯ ಜನತಾ ಪಕ್ಷದ ಸಂಕಲ್ಪವಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಹೇಳಿದ್ದಾರೆ.
ಅವರು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಲಬುರಗಿ ನಗರದಲ್ಲಿ ಯಾವ ಯಾವ ಸಮಸ್ಯೆಗಳಿವೆ ಎನ್ನುವುದನ್ನು ಆಲಿಸಿ, ಅವುಗಳ ಪರಿಹಾರವನ್ನು ಹುಡುಕಿ ಇಡೀ ನಗರವನ್ನೇ ಬೇರೆ ನಗರಗಳಿಗಿಂತ ಸ್ವಚ್ಚ, ಸುಂದರವಾಗಿ ಹಾಗೂ ಹಸರಿಕರಣ ಮಾಡಿ, ಸ್ಮಾರ್ಟ ಸಿಟಿಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದರು.
ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳು,ಪುಟಪಾತ್, ಓಪನ್ ಜಿಮ್ಸ್, ಉದ್ಯಾನವನ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳನ್ನು ನೋಡಿಕೊಂಡು ನಾವು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಆಡಳಿತದಿಂದ ಜಿಲ್ಲೆಯಲ್ಲಿ ಯಾವ ಅಭಿವೃದ್ಧಯೂ ಆಗಿಲ್ಲ. ಹೀಗಾಗಿ ಕಲಬುರಗಿ ನಗರದ ಹಲವು ಸಮಸ್ಯೆಗಳನ್ನು ನಾವು ಮುಂಬರುವ ದಿನಗಳಲ್ಲಿ ಅಭಿವೃದ್ದಿ ಮಾಡುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ ಎಂದರು. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷವು 35ಕ್ಕಿಂತ ಅಧಿಕ ಸ್ಥಾನಗಳಲ್ಲಿ ಗೆದ್ದು ಆಡಳಿತ ನಡೆಸಲಿದೆ ಎಂದರು. ಬಿಜೆಪಿ ಪಕ್ಷದ ಐದು ವರ್ಷದ ನಮ್ಮ ಆಡಳಿತ ಕೇವಲ ಒಳ್ಳೆಯ ಆಡಳಿತ ನೀಡುವಲ್ಲಿ ಮುನ್ನುಗುತ್ತಿದೆ ಎಂದರು.
ಮಂಗಳೂರು,ಉಡುಪಿ,ಮೈಸೂರು, ನಗರಗಳು ಉರುವ ರೀತಿಯಲ್ಲಿ ಕಲಬುರಗಿಯನ್ನು ಕೊಂಡೊಯ್ಯಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss