ಹೊಸ ದಿಗಂತ ಡಿಜಿಟಲ್ ಡೆಸ್ಕ್
ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಎದುರು ಟೆಸ್ಟ್ ಪಂದ್ಯವನ್ನು ಗೆಲುವು ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ಮೈದಾನದಲ್ಲಿ ಭಾರತೀಯ ಆಟಗಾರರು ತಮ್ಮ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ವೇಳೆ ಈ ಗೆಲುವಿನ ಕ್ಷಣವನ್ನು ಆಸೀಸ್ ನಾಯಕಿ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದ ಕ್ಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಭಾರತ ಮಹಿಳಾ ತಂಡವು ಕೊನೆಯ ದಿನ ಗೆಲ್ಲಲು ಕೇವಲ 75 ರನ್‌ಗಳ ಸಾಧಾರಣ ಗುರಿ ಪಡೆದಿತ್ತು. ಹರ್ಮನ್‌ಪ್ರೀತ್ ಕೌರ್ ಪಡೆ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ಕೇಕೆ ಹಾಕುವಲ್ಲಿ ಯಶಸ್ವಿಯಾಯಿತು.
Spirit of Cricket 🤝
Australia Captain Alyssa Healy on that gesture to click a special moment, ft. #TeamIndia 📸 👏#INDvAUS | @IDFCFIRSTBank pic.twitter.com/PJ6ZlIKGMb
— BCCI Women (@BCCIWomen) December 24, 2023
ಆಸ್ಟ್ರೇಲಿಯಾ ಎದುರು ಟೆಸ್ಟ್ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದರು. ಈ ಕ್ಷಣವನ್ನು ಆಸೀಸ್ ನಾಯಕಿ ನಿರ್ಭಾವುಕವಾಗಿ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಇನ್ನು ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಆಸೀಸ್ ನಾಯಕಿ ಅಲಿಸಾ ಹೀಲಿ, ಭವಿಷ್ಯದಲ್ಲಿ ಇನ್ನಷ್ಟು ಟೆಸ್ಟ್ ಪಂದ್ಯಗಳು ಆಯೋಜನೆಗೊಂಡರೆ ಚೆನ್ನಾಗಿರುತ್ತದೆ ಎಂದು ಹೇಳಿದರು.