ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಹಾಗೂ ಮುತ್ಸದ್ಧಿ ರಾಜಕಾರಣಿ ಶ್ರೀ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ ಮಿಡಿದಿದ್ದಾರೆ.
ಶ್ರೀಯುತರ ನಿಧನದಿಂದಾಗಿ ತೀವ್ರ ದುಃಖವಾಗಿದೆ. ಅವರ ನಾಯಕತ್ವ ಮತ್ತು ಸಾರ್ವಜನಿಕ ಸೇವೆಯ ಪರಂಪರೆ ನಮ್ಮ ರಾಜ್ಯ ಮತ್ತು ರಾಷ್ಟ್ರದ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ.ಅವರ ದೂರದೃಷ್ಟಿಯಿಂದಾಗಿ ಇಂದು ಬೆಂಗಳೂರು ಜಾಗತಿಕ ನಗರವಾಗಿ ಬೆಳೆಯಲು ಸಹಕಾರಿಯಾಗಿದ್ದು ನಾವು ಇಂದು ಅದರ ಲಾಭವನ್ನು ಪಡೆಯುತ್ತಿದ್ದೇವೆ.
ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕೊಡುಗೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ಖರ್ಗೆ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.