Sunday, December 4, 2022

Latest Posts

ಸ್ಪೈಸ್ ಜೆಟ್ ವಿಮಾನದಲ್ಲಿ ಹೊಗೆ: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶೀಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸ್ವಲ್ಪದರಲ್ಲೇ ಅಪಘಾತದಿಂದ ಪಾರಾಗಿದೆ. ಗೋವಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅಪಾಯವನ್ನರಿತ ಪೈಲಟ್‌ ಮುಂಜಾಗ್ರತಾ ಕ್ರಮವಾಗಿ ಶಂಷಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು.

ವಿಮಾನದಲ್ಲಿನ ಹೊಗೆಯಿಂದಾಗಿ ಮಹಿಳಾ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಆಕೆ ವಿಮಾನ ನಿಲ್ದಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ. ವಿಮಾನದಲ್ಲಿ ಒಟ್ಟು 86 ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಮಾನದ ತುರ್ತು ಭೂ ಸ್ಪರ್ಶದಿಂದಾಗಿ ಒಂಬತ್ತು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 ದೇಶೀಯ, 2 ಅಂತಾರಾಷ್ಟ್ರೀಯ ಮತ್ತು ಒಂದು ಕಾರ್ಗೋ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!