October 15, 2026
Thursday, October 15, 2026
spot_img

ಇಂಡಿಗೋ ವಿಮಾನದಲ್ಲಿ ಹೊಗೆ: 194 ಪ್ರಯಾಣಿಕರೊಂದಿಗೆ ರಾಜ್‌ಕೋಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಪತ್ತೆಯಾದ ಹಿನ್ನೆಲೆಯಲ್ಲಿ ಗುಜರಾತಿನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 194 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.

ಮೂಲಗಳ ಪ್ರಕಾರ, ಇಂಡಿಗೋ 6E 1452 ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಬಳಿಕ ಪೈಲಟ್‌ಗಳು ತಕ್ಷಣವೇ ರಾಜ್‌ಕೋಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಸಂಪರ್ಕಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ವಿಮಾನ ನಿಲ್ದಾಣದಲ್ಲಿ ಫುಲ್ ಎಮರ್ಜೆನ್ಸಿ ಘೋಷಿಸಲಾಗಿತ್ತು.

ಇದನ್ನೂ ಓದಿ:

ವಿಮಾನವು ಯಾವುದೇ ಅಡಚಣೆಯಿಲ್ಲದೆ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಲಾಗಿದೆ.

ರಾಜ್‌ಕೋಟ್ ವಿಮಾನ ನಿಲ್ದಾಣದ ನಿರ್ದೇಶಕ ದಿಗಂತ ಬೋರಾ ಮಾತನಾಡಿ, ಕಾರ್ಗೋ ವಿಭಾಗದಲ್ಲಿ ಹೊಗೆ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದು, ಘಟನೆಯ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Must Read