ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮ್ಯಯ ಅವರು ಇಂದುಮೊದಲು ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರುಶನ ಪಡೆದುಕೊಂಡರು.
ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು. ಈ ಸಭೆಯಲ್ಲಿ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆಗಳು ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ . ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಿದ್ದೇವೆ. ಹಾಗಿಯೇ ಭಕ್ತಾದಿಗಳಿಗೆ ಸೌಲಭ್ಯ ಒದಗಿಸಲು ಪ್ರಾಧಿಕಾರ ರಚನೆ ಮಾಡಲಾಗಿದ್ದು, ಅಪರಾಧ ತಡೆಗಟ್ಟಲು ಟಾಸ್ಕ್ಫೋರ್ಸ್ ರಚನೆ ಮಾಡುತ್ತೇವೆ. ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.