ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹಾವು! ತನಿಖೆಗೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಪತ್ತೆಯಾಗಿದ್ದು, ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿ737-800 ವಿಮಾನವು ಕೇರಳದ ಕ್ಯಾಲಿಕಟ್‌ನಿಂದ ಬಂದಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಇದು ನೆಲದ ನಿರ್ವಹಣೆಯ ಲೋಪವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!