May 8, 2026
Friday, May 8, 2026
spot_img

ಮಧ್ಯಾಹ್ನದ ಊಟದಲ್ಲಿ ಅನ್ನ-ಸಾಂಬಾರ್‌ ಜತೆ ಹಾವಿನ ಮರಿ ಬಡಿಸಿದ ಸಿಬ್ಬಂದಿ, ಮಕ್ಕಳು ಆಸ್ಪತ್ರೆಗೆ

ಹೊಸದಿಗಂತ ಡಿಜಿಟೆಲ್‌ ಡೆಸ್ಕ್:

ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದ್ದು, ಇದರಿಂದ ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘೋರಾ ಘಟನೆಯೊಂದು ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ.

ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಮಾಧ್ಯಮ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟದಲ್ಲಿ ಮೃತ ಹಾವಿನ ಮರಿಯೊಂದು ಪತ್ತೆಯಾಗಿದೆ. ಬಳಿಕ ಊಟ ಸೇವಿಸಿದ ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಿಂದ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

250 ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು, ಅವರಲ್ಲಿ 115 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಹರ್ಸಾ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಎಲ್ಲಾ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಜಿಲ್ಲಾಧಿಕಾರಿ ದೀಪೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಈ ಕುರಿತು ತನಿಖೆಗೆ ಆದೇಶಿಸಿದ್ದು, ಬಿಸಿಯೂಟ ಪೂರೈಸುವ NGO ಮತ್ತು ಶಾಲಾ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಿದ್ದಾರೆ. ಸದ್ಯ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !