ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಮ್ಮ ಕುಟುಂಬವನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇನೆ. ಹೀಗಾಗಿ ನನ್ನ ಹಾಗೂ ನನ್ನ ಕುಟುಂಬದವರ ಬಗ್ಗೆ ಕಾಳಜಿ ವಹಿಸಿ ಎಂದು ಮೈಸೂರು ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದೆ. ಗನ್ ಮ್ಯಾನ್ ಕೊಡುವಂತೆ ಕೇಳಿದೆ. ಆದರೆ, ಯಾವುದೇ ಭರವಸೆ ನೀಡಿಲ್ಲ ಎಂದು ಸ್ನೇಹಮಯಿ ಕೃಷ್ಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮಗೆ ಮತ್ತು ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೋರಿದ್ದಾರೆ.