Sunday, June 4, 2023

Latest Posts

ಜಮ್ಮು-ಕಾಶ್ಮೀರಕ್ಕೆ ಹಿಮದ ಹೊದಿಕೆ: ಹಿಮಕುಸಿತ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜನವರಿ 8 ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹೆಚ್ಚು ಹಿಮ ಬೀಳುತ್ತಿರುವ ಪ್ರದೇಶಗಳಿಗೆ ಹೋಗುವುದನ್ನು ನಿಲ್ಲಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೋದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಮದಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದ್ದು, ವಸ್ತುಗಳನ್ನು ಸಾಗಿಸುವುದು ಕಷ್ಟವಾಗಿದೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ರಸ್ತೆಗಳ ಮೇಲೆ ಬೆಟ್ಟಗಳಿಂದ ಕಲ್ಲು, ಮಣ್ಣು ಕುಸಿದಿದ್ದು, ಸಂಚಾರ ಅಸಾಧ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!