‘ಅದ್ಹೇಗೆ ಪೋಕ್ಸೋ ಕೇಸ್ ದಾಖಲಿಸುತ್ತಾನೆ? ಅವನೇನು ಕನ್ನಡಿಗನೋ, ಮಹಾರಾಷ್ಟ್ರದವನೋ?’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಅಗ್ರಹಿಸಿದೆ.

ಈ ಸಂದರ್ಭದಲ್ಲಿ ಮಾತಾಡಿದ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ, ಕಂಡಕ್ಟರ್ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ, ದಾಖಲು ಮಾಡಿರುವ ಪೊಲೀಸ್ ಇನ್ಸ್​ಪೆಕ್ಟರ್​​ ಮುಖಕ್ಕೆ ಎರಡು ಬಿಗಿಯಬೇಕು, ಅದ್ಹೇಗೆ ಪೋಕ್ಸೋ ಕೇಸನ್ನು ದಾಖಲಿಸುತ್ತಾನೆ? ಅವನೇನು ಕನ್ನಡಿಗನೋ ಅಥವಾ ಮಹಾರಾಷ್ಟ್ರದವನೋ? ಗೃಹ ಸಚಿವರು ತಮ್ಮ ರಾಜಕೀಯ ದೊಂಬರಾಟವನ್ನು ಪಕ್ಕಕ್ಕಿಟ್ಟು ಬೆಳಗಾವಿ ಕನ್ನಡಿಗರ ಬಗ್ಗೆ ಯೋಚಿಸಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!