March 30, 2026
Monday, March 30, 2026
spot_img

ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ: ಮನೆಮನೆಗೂ ತಟ್ಟುತ್ತಿದೆ ಕೊಲ್ಲಿ ಯುದ್ಧದ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮ ಇದೀಗ ಭಾರತೀಯ ಮಾರುಕಟ್ಟೆಯ ಮೇಲೂ ಕಾಣಿಸಿಕೊಳ್ಳಲು ಆರಂಭಿಸಿದೆ. ಕಳೆದ ಒಂದು ವಾರದಿಂದ ಅಡುಗೆ ಎಣ್ಣೆಯ ಬೆಲೆ ನಿಧಾನವಾಗಿ ಏರಿಕೆಯಾಗುತ್ತಿದ್ದು, ಇದು ಸಾಮಾನ್ಯ ಜನರ ಅಡುಗೆ ಖರ್ಚಿನ ಮೇಲೆ ಹೆಚ್ಚುವರಿ ಒತ್ತಡ ತರಲಿದೆ ಎನ್ನಲಾಗುತ್ತಿದೆ.

ಈ ಹಿಂದೆ 750 ಮಿ.ಲೀ. ರುಚಿ ಗೋಲ್ಡ್ ಅಡುಗೆ ಎಣ್ಣೆ ಪ್ಯಾಕೆಟ್ ಸುಮಾರು 108 ರೂಪಾಯಿಗೆ ದೊರೆಯುತ್ತಿತ್ತು. ಆದರೆ ಈಗ ಅದರ ದರ ಸುಮಾರು 120 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ಇದೇ ರೀತಿಯ ಪ್ರವೃತ್ತಿ ಮುಂದುವರಿದರೆ ಮುಂದಿನ ಕೆಲ ವಾರಗಳಲ್ಲಿ ಈ ದರ 140ರಿಂದ 150 ರೂಪಾಯಿವರೆಗೆ ತಲುಪುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.

ಇದನ್ನೂ ಓದಿ:

ರಷ್ಯಾ–ಉಕ್ರೇನ್ ಯುದ್ಧದ ಸಮಯದಲ್ಲಿ ಅಡುಗೆ ಎಣ್ಣೆಯ ಬೆಲೆ ಭಾರೀ ಏರಿಕೆಯಾಗಿದ್ದ ಅನುಭವ ಇರುವುದರಿಂದ ಕೆಲವು ವ್ಯಾಪಾರಿಗಳು ಹಾಗೂ ಹೋಟೆಲ್ ಮಾಲೀಕರು ಈಗಲೇ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ ಸಂಗ್ರಹಿಸಲು ಮುಂದಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !