ಸೋಶಿಯಲ್‌ ಮೀಡಿಯಾ ಸಖತ್‌ ಸ್ಪೀಡ್‌, ಯುವತಿಗೆ ಕಿರುಕುಳ ಕೊಟ್ಟ ಯುವಕರು ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಯುವಕರಿಬ್ಬರು ಕಾರಿನಲ್ಲಿ ಹೋಗುತ್ತಿದ್ದ ಯುವತಿಯನ್ನು ಚೇಸ್‌ ಮಾಡಿ ಕಿರುಕುಳ ನೀಡಿದ್ದ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು.

ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ನಿನ್ನೆ ರಾತ್ರಿ ಕಾರಿನಲ್ಲಿ ಯುವತಿಗೆ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತೇಜಸ್ ಮತ್ತು ಜಗನ್ನಾಥ್ ಗುರುತಿಸಲಾಗಿದೆ. ಮೂರನೇ ಆರೋಪಿ ಕಣ್ಣನ್ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!