ಹೊಸದಿಗಂತ ಡಿಜಿಟಲ್ ಡೆಸ್ಕ್;
ಆಸ್ಟ್ರೇಲಿಯಾದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡುವ ಕಾನೂನು ಜಾರಿಗೆ ಬಂದಿದೆ.
ಈ ಮೂಲಕ, ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆ ಸಂಬಂಧ ಸಮಗ್ರ ಕಾನೂನು ರೂಪಿಸಿದ ಮೊದಲ ದೇಶವಾಗಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಥ್ರೆಡ್ಸ್, ಸ್ಮ್ಯಾಪ್‌ಚಾಟ್, ಟಿಕ್‌ಟಾಕ್ ನಂತಹ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಬಳಕೆದಾರರ ವಯಸ್ಸನ್ನ ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗಿದೆ.
ಮಕ್ಕಳ ಸುರಕ್ಷತೆ ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆ ನಿಗದಿಪಡಿಸುವ ಉದ್ದೇಶ ಈ ಕಾನೂನಿನಲ್ಲಿದೆ ಅಂತ ಆಸ್ಟ್ರೇಲಿಯಾ ಸರ್ಕಾರ ಹೇಳಿದೆ.

