ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದ್ದಾರೆ.
ಈ ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದಾರೆ.
ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚು ಸಮಯ ಕಳೆಯುವುದರ ದುಷ್ಪರಿಣಾಮದ ಬಗ್ಗೆ ಸರ್ಕಾರ ಗಮನಹರಿಸಿದ್ದು, ಹೀಗಾಗಿ ಈ ನಿರ್ಧಾರಕ್ಕೆ ಸರಕಾರ ಬಂದಿದೆ. ಇದರ ಜೊತೆಗೆ ಈ ನಿರ್ಬಂಧಗಳನ್ನು16 ವರ್ಷ ವಯಸ್ಸಿನವರೆಗಿನ ಮಕ್ಕಳಿಗೂ ವಿಸ್ತರಿಸುವ ಸುಳಿವು ನೀಡಿದ್ದಾರೆ.
ಸಣ್ಣ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸುವ ಮೂಲಕ, ಸರ್ಕಾರವು ಮಕ್ಕಳಿಗೆ ಸುರಕ್ಷಿತ ಡಿಜಿಟಲ್ ಜಗತ್ತನ್ನು ನೀಡುವ ಮತ್ತು ಆರೋಗ್ಯಕರ ಅಭ್ಯಾಸಗಳಿಗೆ ಒತ್ತು ನೀಡುವ ಗುರಿಯನ್ನು ಹೊಂದಿದೆ.



