ಹೊಸದಿಗಂತ ಡಿಜಿಟಲ್ ಡೆಸ್ಕ್:
16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಅಂಗೀಕರಿಸಿದೆ.
ಮಸೂದೆಯನ್ನು ಉಭಯಪಕ್ಷೀಯ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.
ಸಾಮಾಜಿಕ ಮಾಧ್ಯಮ ಸಂಸ್ಥೆಗಳು ನಿಯಮವನ್ನು ಅನುಸರಿಸಲು ವಿಫಲವಾದಲ್ಲಿ 274 ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.