ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಹಠಾತ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರವಾಲ್ ಅವರು ನಿಧನರಾಗಿದ್ದಾರೆ. ಈ ಸುದ್ದಿಯನ್ನು ಆಕೆಯ ಕುಟುಂಬದವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡ ಭಾವನಾತ್ಮಕ ಹೇಳಿಕೆಯ ಮೂಲಕ ಖಚಿತಪಡಿಸಿದ್ದಾರೆ.

ಮಿಶಾ ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟರ್ ಹಾಗೂ ರೀಲ್ಸ್ ಮೂಲಕ ಪ್ರಸಿದ್ಧರಾಗುವ ಮೂಲಕ ಅಪಾರ ಫಾಲೋವರ್ಸ್ ಪಡೆದಿದ್ದಾರೆ. ಆಕೆಯ ಹಠಾತ್ ನಿಧನಕ್ಕೆ ಅಭಿಮಾನಿಗಳು, ಸ್ನೇಹಿತರು, ಕೆಲ ಕಂಟೆಂಟ್ ಕ್ರಿಯೇಟರ್ ಗಳು ತೀವ್ರ ದು:ಖ ವ್ಯಕ್ತಪಡಿಸುತ್ತಿದ್ದಾರೆ.

ಆಕೆಯ ಕುಟುಂಬಸ್ಥರು ಹಂಚಿಕೊಂಡಿರುವ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ, ಮಿಶಾ ಅಗರ್ವಾಲ್ ನಿಧನದ ಹೃದಯ ವಿದ್ರಾವಕ ಸುದ್ದಿಯನ್ನು ನಾವು ಹಂಚಿಕೊಳ್ಳುತ್ತೇವೆ. ಆಕೆ ಹಾಗೂ ಅವರ ಕೆಲಸಕ್ಕೆ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು. ಈ ನಷ್ಟವನ್ನು ಎದುರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಫೋಸ್ಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!