April 10, 2026
Friday, April 10, 2026
spot_img

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕಾಂಚನಾ ಹತ್ಯೆ ಕೇಸ್: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಮುಖ ಆರೋಪಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2025 ರ ಜೂನ್ ನಲ್ಲಿ ನಡೆದ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕಾಂಚನಾ ಕುಮಾರಿ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

2025 ರ ಜೂನ್ 11 ರಂದು ಪಂಜಾಬಿನ ಬಟಿಂಡಾದ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರಿನಲ್ಲಿ ಕಾಂಚನಾ ಕುಮಾರಿ ಅವರ ಶವ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಅಮೃತ್‌ಪಾಲ್ ಮೆಹ್ರಾನ್ ಯುಎಇಗೆ ಪಲಾಯನ ಆಗಿದ್ದನು.

ಈ ಹಿನ್ನೆಲೆ ಆತನ ಬಂಧನಕ್ಕೆ ಬಟಿಂಡಾ ಪೊಲೀಸರು ಲುಕ್‌ಔಟ್ ನೊಟೀಸ್ ಹೊರಡಿಸಿದ್ದರು. ಈ ಬೆನ್ನಲ್ಲೇ ಜನವರಿಯಲ್ಲಿ ಯುಎಇ ಪೊಲೀಸರು ಆತನನ್ನು ಬಂಧಿಸಿದ್ದರು. ಇದೀಗ ಭಾರತಕ್ಕೆ ಗಡೀಪಾರು ಮಾಡಲಾಗಿದ್ದು, ಈ ವೇಳೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಇತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !