ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನಲ್ಲಿ ಅಧ್ಯಕ್ಷ, ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಮತ್ತಷ್ಟು ಬೆಳವಣಿಗೆ ನಡೆಯುತ್ತಿದ್ದು ಇಂದು ಗೃಹ ಸಚಿವ ಪರಮೇಶ್ವರ್ ಅವರನ್ನು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಭೇಟಿಯಾಗಿ ಚರ್ಚೆ ನಡೆಸಿದರು.
ಮಹದೇಪ್ಪ ಅವರು ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಪರಮೇಶ್ವರ ಅವರ ನಿವಾಸಕ್ಕೆ ಆಗಮಿಸಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಮಹದೇವಪ್ಪ ಭೇಟಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ಅದರಲ್ಲಿ ವಿಶೇಷವೇನೂ ಇಲ್ಲ. ಅವರು ವೈಯಕ್ತಿಕ ಕೆಲಸಕ್ಕೆ ಬಂದು ಮಾತನಾಡಿದರು. ಅವರು ಆಗಾಗ ಬರುತ್ತಾರೆ. ತಿಂಡಿಗೂ-ಊಟಕ್ಕೆ ಹೋಗಬಾರದಾ? ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.