ಪ್ರಾಮಾಣಿಕವಾಗಿರುವ ಮಾಧ್ಯಮಗಳಿಗೆ ಸಮಾಜ ಗೌರವ ನೀಡುತ್ತೆ, ಹಿಂಗ್ಯಾಕಂದ್ರು ಡಿಕೆಶಿ?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುದ್ದಿಯನ್ನು ವೈಭವೀಕರಿಸಬೇಡಿ. ಮಾಧ್ಯಮಗಳು ಸತ್ಯದ ಕನ್ನಡಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಮನಗರ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರಥಮ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಮಾಧ್ಯಮಗಳಿಗಿಂತ ಸಮಾಜದ ವೇಗ ಹೆಚ್ಚಿದೆ. ನಾಗರಿಕ ಪತ್ರಿಕೋದ್ಯಮದ ಪರಿಕಲ್ಪನೆಯು ಹೊರಹೊಮ್ಮಿದೆ ಮತ್ತು ಹಳ್ಳಿಯ ಹುಡುಗರು ತಮ್ಮ ಆಲೋಚನೆಗಳ ವೀಡಿಯೊಗಳನ್ನು ಪೋಸ್ಟ್ ಮಾಡುವ ವ್ಯವಸ್ಥೆ ಸೃಷ್ಟಿಯಾಗಿದೆ. ಇದರಿಂದ ಮಾಧ್ಯಮಗಳಲ್ಲಿ ಪೈಪೋಟಿ ತೀವ್ರವಾಗುತ್ತಿದೆ ಎಂದರು.

ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ಗಳು ಹೆಚ್ಚುತ್ತಿರುವಾಗ ಪತ್ರಿಕೆಗಳ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರಾಮಾಣಿಕ ಮಾಧ್ಯಮವನ್ನು ಸಮಾಜ ಗೌರವಿಸುತ್ತದೆ. ಅದಕ್ಕಾಗಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!