ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಬಾಗಲಕೋಟೆಯ ಕೂಡಲಸಂಗಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದೆವು. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಯಾಗಬೇಕಿರುವುದು ಬಹಳ ಮುಖ್ಯ ಎಂದರು.

ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!