Friday, August 19, 2022

Latest Posts

ಮಣ್ಣು ತೆರವು‌ಕಾರ್ಯ ಪೂರ್ಣ: ರೈಲು ಸಂಚಾರ ಆರಂಭ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮಂಗಳೂರು:

ಮಂಗಳೂರು- ಮುಂಬೈ ರೈಲು ಸಂಚಾರ ಮತ್ತೆ ಪುನರಾರಂಭಗೊಂಡಿದೆ. ಶುಕ್ರವಾರ ಇಲ್ಲಿನ ಕುಲಶೇಖರ ಬಳಿ ತಡೆಗೋಡೆ ಹಾಗೂ ಗುಡ್ಡ ಕುಸಿದು ರೈಲ್ವೇ ಹಳಿ ಮೇಲೆ ಬಿದ್ದ ಪರಿಣಾಮ ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಸತತ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಭಾನುವಾರ ಬೆಳಗ್ಗಿನಿಂದ ರೈಲು ಸಂಚಾರ ಆರಂಭಗೊಂಡಿದೆ. ರೈಲು ಹಳಿಯ ಮೇಲೆ ಬಿದ್ದಿದ್ದ ಕಲ್ಲು, ಮಣ್ಣುಗಳನ್ನು ತೆರವುಗೊಳಿಸುವ ಕಾರ್ಯ ತಡ ರಾತ್ರಿಯವರೆಗೂ ಮುಂದುವರಿದಿತ್ತು. ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದು, ಶೀಘ್ರ ಕಾಮಗಾರಿ ಮುಗಿಯುವಲ್ಲಿ ಒತ್ತು ನೀಡಿದ್ದರು.
ಭಾನುವಾರ ಬೆಳಗ್ಗೆ 8.45ರ ವೇಳೆಗೆ ಎರ್ನಾಕುಲಂನಿಂದ ಅಜ್ಮೀರ್‌ಗೆ ಮೊದಲ ರೈಲು ಪ್ರಯಾಣ ಬೆಳೆಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!