ಮಣ್ಣು ತೆರವು ಕಾರ್ಯ ಪೂರ್ಣ, ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣು ತೆರವು ಕಾರ್ಯಾಚರಣೆ ಸಂಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಸಂಚರಿಸಬೇಕಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ ಪ್ರೆಸ್ ರೈಲು ಮಾತ್ರ ರದ್ದಾಗಿದ್ದು, ಉಳಿದ ಎಲ್ಲಾ ರೈಲುಗಲು ನಿಗದಿತ ದಿನಾಂಕ ಹಾಗೂ ಸಮಯದ ಪ್ರಕಾರ ಸಂಚರಿಸಲಿದೆ. ಮಣ್ಣು ಕುಸಿತಗೊಂಡ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ. ಮೇಲ್ಭಾಗದಿಂದಲೇ ಮಣ್ಣನ್ನು ತೆರವು ಗೊಳಿಸುವ ಮೂಲಕ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಸಲಾಗಿತ್ತು. ಇದೀಗ ಮರಳಿ ರೈಲು ಸೇವೆಗಳು ಪ್ರಾರಂಭವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!