ಹೊಸದಿಗಂತ ಆನ್ ಲೈನ್ ಡೆಸ್ಕ್:
ಹುಬ್ಬಳ್ಳಿ ನಗರದ ಕೊಯಿನ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಚರಂಡಿ ಕಾಮಗಾರಿ ನಡೆಯುತ್ತಿರುವ ವೇಳೆ ಮಣ್ಣು ಕುಸಿದು ಬಿದ್ದು ಮಣ್ಣಿನಡಿ ಸಿಲುಕಿದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನಾ ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹರಸಾಹಸ ಪಟ್ಟು ಕಾರ್ಮಿಕನನ್ನು ಮಣ್ಣಿನಡಿಯಿಂದ ಹೊರಕ್ಕೆ ತಂದಿದ್ದಾರೆ. ಗಂಟೆಗೂ ಹೆಚ್ಚು ಕಾಲ ಮಣ್ಣಿನಡಿ ಸಿಲುಕಿದ ಪರಿಣಾಮ ಆತನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದಾರೆ.