ಎರಡು ದಿನಗಳ ಕಾಲ ಪವಿತ್ರ ಮೃತ್ತಿಕೆ ಸಂಗ್ರಹಣೆ: ವಿವಿಧ ಗ್ರಾಮಗಳಿಗೆ ಭೇಟಿ

ಹೊಸದಿಗಂತ ವರದಿ ಮಡಿಕೇರಿ:

ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಅ.27 ಮತ್ತು 28 ರಂದು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
ಅ.27 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ ದೊರೆಯಲಿದೆ.

ಬಳಿಕ ಗಾಳಿಬೀಡು, ಕೆ.ನಿಡುಗಣೆ, ಮೇಕೇರಿ, ಹಾಕತ್ತೂರು, ಹೊಸ್ಕೇರಿ, ಮರಗೋಡು, ಕಾಂತೂರು ಮೂರ್ನಾಡು, ಹೊದ್ದೂರು, ನಾಪೋಕ್ಲು, ಕೊಣಂಜಗೇರಿ, ನರಿಯಂದಡ, ಕಕ್ಕಬ್ಬೆ, ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೇರಿ, ಹಾಗೆಯೇ ಅ. 28 ರಂದು ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಕರಿಕೆ, ಪೆರಾಜೆ, ಚೆಂಬು, ಸಂಪಾಜೆ, ಮದೆ, ಕಡಗದಾಳು, ಮಕ್ಕಂದೂರು ಗ್ರಾಮ ಪಂಚಾಯಿತಿಗಳಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ ಸಂಗ್ರಹಣೆ ಪ್ರಯುಕ್ತ ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ನಡೆಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿ ಕಾರ್ಯಕ್ರಮದ ಯಶಸ್ಸಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!