ಹೊಸ ದಿಗಂತ ವರದಿ, ವಿಜಯಪುರ:
ಸೊಲ್ಲಾಪುರ- ವಿಜಯಪುರ ಮಾರ್ಗದ 25.54 ಕಿಮೀ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಲಿಮ್ಕಾ ಬುಕ್ ನಲ್ಲಿ ದಾಖಲಾಗಿದೆ.
ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ ಅವರ ನೇತೃತ್ವದಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.
ಕೇವಲ 18 ಗಂಟೆಯಲ್ಲ 25.54 ಕಿಮೀ ನಷ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿದ್ದಕ್ಕೆ ಲಿಮ್ಕಾ ಬುಕ್ ನಲ್ಲಿ ದಾಖಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಟ್ವೀಟ್ ಮಾಡಿದ್ದಾರೆ.
ಅಭಿನಂದನೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಈ ಕಾಮಗಾರಿ ಅನುಷ್ಠಾನಗೊಳ್ಳುತ್ತಿದೆ. ಈ ಕಾರ್ಯ ಶ್ಲಾಘನೀಯವಾದದ್ದು ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ತಂಡಕ್ಕೆ ಅಭಿನಂದಿಸಿದ್ದಾರೆ.