ರಜೆಗೆಂದು ಊರಿಗೆ ಬಂದಿದ್ದ ಯೋಧ ಇಬ್ರಾಹಿಂ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಅನಗೋಳದ ಬಜಾರ್‌ನಲ್ಲಿ ನಡೆದಿದೆ.

ಇಬ್ರಾಹಿಂ ದೇವಲಾಪುರ (37) ಮೃತ ಯೋಧ.ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ರಜೆಗೆಂದು ಊರಿಗೆ ಬಂದಿದ್ದರು. ಈ ವೇಳೆ ಅನಗೋಳದ ಬಜಾರ್‌ಗೆ ತೆರಳಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!