ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಆಂಧ್ರಪ್ರದೇಶ ಮೂಲದ ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಮೃತರು.

ಮುರಳಿ ನಾಯಕ್, 2022 ಅಕ್ಟೋಬರ್​ನಲ್ಲಿ ಅಗ್ನಿವೀರ್‌ಗೆ ಆಯ್ಕೆಯಾಗಿದ್ದರು. ಅವರನ್ನು ಮಹಾರಾಷ್ಟ್ರದ ನಾಸಿಕ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊಂದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!