ಗಡಿಯೊಳಕ್ಕೆ ನುಗ್ಗಲು ಯತ್ನಿಸಿದ ಉಗ್ರನ ಎನ್‌ ಕೌಂಟರ್‌: ಓರ್ವ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿವೆ. ಈ ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ದಾರ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರರ ಗುಂಪು ಒಳನುಸುಳಲು ಯತ್ನಿಸಿದ ವೇಳೆ ಗುಂಡಿನ ಚಕಮಕಿ ನಡೆದಿದೆ. ಎಲ್‌ಒಸಿಯಲ್ಲಿ ಉಗ್ರರ ಅನುಮಾನಾಸ್ಪದ ಚಲನವಲನವನ್ನು ಸೇನಾ ಪಡೆಗಳು ಗಮನಿಸಿ ತಕ್ಷಣವೇ ಕಾರ್ಯಾಚರಣೆಗೆ ಇಳಿದರು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿವೆ.
ಗುಂಡಿನ ಚಕಮಕಿ ವೇಳೆ ಓರ್ವ ಸೇನಾಯೋಧ ಹುತಾತ್ಮರಾಗಿದ್ದಾರೆ. ಹತ್ಯೆಯಾದ ಉಗ್ರನಿಂದ ಒಂದು ಎಕೆ-47, ನಾಲ್ಕು ಪಿಸ್ತೂಲ್‌ಗಳು, ಮೂರು ಎಕೆ-47 ಮ್ಯಾಗಜೀನ್‌ಗಳು, ಮೂರು ಪಿಸ್ತೂಲ್ ಮ್ಯಾಗಜೀನ್‌ಗಳು, ಐದು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!