ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮುನಿ ನಾರಾಯಣ ಹೃದಯಾಘಾತದಿಂದ ಸಾವನ್ನಪ್ಪಿದ ಯೋಧ. ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುನಿ ನಾರಾಯಣ ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದರು.
ರಾತ್ರಿ ಮಲಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇಂದು ಸ್ವಗ್ರಾಮ ಆಚಂಪಲ್ಲಿ ಗ್ರಾಮದಲ್ಲಿ ಮುನಿ ನಾರಾಯಣ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.